ಬೆಂಗಳೂರು: ‘ಇಂದಿರಾನಗರ ಪ್ರದೇಶದಲ್ಲಿ ಪಬ್ ಮತ್ತು ಬಾರ್‌ಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸಿ’ ಎಂದು ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿದೆ.
ಈ ಕುರಿತಂತೆ, ‘ಡಿಫೆನ್ಸ್ ಕಾಲೋನಿ ನಿವಾಸಿಗಳ ಸಂಘ’ದ ಅಧ್ಯಕ್ಷ ಅಶೋಕ್ ಶರತ್ ಸೇರಿದಂತೆ ಒಟ್ಟು 20 ಜನರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಕೆ.ಜಿ.ರಾಘವನ್, ‘2019ರ ಮಾರ್ಚ್ 22ರಂದು ನ್ಯಾಯಪೀಠ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿದ್ದರೂ ಇನ್ನೂ ಅದನ್ನು ಪಾಲಿಸಿಲ್ಲ’ ಎಂದರು.
ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.