ADVERTISEMENT

ಬಹುಮಾನಕ್ಕೆ ಕೃತಿಗಳ ಆಹ್ವಾನ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2014, 19:30 IST
Last Updated 9 ಡಿಸೆಂಬರ್ 2014, 19:30 IST

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ 2013ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಕೃತಿಗಳನ್ನು ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2013ರ ಜನವರಿ 1ರಿಂದ ಡಿಸೆಂಬರ್‌ 31ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು.

ಕಾವ್ಯ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಆತ್ಮಕತೆ, ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ಅನುವಾದ ಮತ್ತು ಸಂಕೀರ್ಣ ವಿಭಾಗಗಳಲ್ಲಿ ಒಂದೊಂದು ಕೃತಿಗೆ ಬಹುಮಾನ ನೀಡಲಾಗುತ್ತದೆ.

ಲೇಖಕರ ಮೊದಲ ಸ್ವತಂತ್ರ ಕೃತಿಗೆ  ಮತ್ತು ಕನ್ನಡದಿಂದ ಇಂಗ್ಲಿಷಿಗೆ ಅನುವಾದಗೊಂಡ ಕೃತಿಗೆ ತಲಾ ₨5 ಸಾವಿರ ವಿಶೇಷ ಬಹುಮಾನ ನೀಡಲಾಗುತ್ತದೆ.

ಪುಸ್ತಕ ಕಳುಹಿಸಲು 2015 ಜ.31 ಕಡೆಯ ದಿನ. ವಿಳಾಸ: ರಿಜಿಸ್ಟ್ರಾರ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು–560002. ಮಾಹಿತಿಗೆ: 080–2221 1730

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.