ಬೆಂಗಳೂರು: ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಂಗಳವಾರ ಬೆಳಿಗ್ಗೆ ಲಘು ಭೂಕಂಪದ ಅನುಭವವಾಗಿದೆ.
ಮಲ್ಲೇಶ್ವರ, ರಾಜರಾಜೇಶ್ವರಿನಗರ, ಕೆಂಗೇರಿ, ರಾಜಾಜಿನಗರ, ಮಾಗಡಿ ರಸ್ತೆ, ಬಸವನಗುಡಿ, ಕಾಮಾಕ್ಷಿಪಾಳ್ಯ,ವಿಜಯನಗರದ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2 ರಷ್ಟು ದಾಖಲಾಗಿದ್ದು, 2 ರಿಂದ 6 ಸೆಕೆಂಡ್ ಭೂಮಿ ನಡುಗಿದೆ ಎಂದು ತಿಳಿದುಬಂದಿದೆ.
ಭೂಕಂಪನದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.