ಬೆಂಗಳೂರು: ‘ಜಾನಪದ ಸಂಶೋಧಕ ಡಾ.ಎಚ್.ಎಲ್. ನಾಗೇಗೌಡ ಅವರ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಮೊದಲ ಪ್ರಶಸ್ತಿಗೆ ಛತ್ತೀಸಗಡದ ಪಂಡ್ವಾನಿ ಕಲಾವಿದೆ ತೀಜನ್‌ಬಾಯಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ. ತಿಮ್ಮೇಗೌಡ ಅವರು ಮಾಹಿತಿ ನೀಡಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಗೌಡ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಇದೇ 14 ಮತ್ತು 15ರಂದು ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.