ADVERTISEMENT

ರೈಲುಗಳ ವಿವರ ಸಲ್ಲಿಕೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2015, 19:56 IST
Last Updated 16 ನವೆಂಬರ್ 2015, 19:56 IST

ಬೆಂಗಳೂರು: ‘ಬೆಂಗಳೂರು– ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸುವ ಸಂಬಂಧ ಮುಂದಿನ ಒಂದು ವಾರದಲ್ಲಿ ಸಮಜಾಯಿಷಿ ನೀಡದಿದ್ದರೆ ಇಲಾಖೆಯ ಮುಖ್ಯಸ್ಥರಿಗೆ ಖುದ್ದು ಹಾಜರಿಗೆ ನಿರ್ದೇಶನ ನೀಡಬೇಕಾಗುತ್ತದೆ’ ಎಂದು ಹೈಕೋರ್ಟ್‌ ರೈಲ್ವೆ ಇಲಾಖೆಗೆ ಮೌಖಿಕ ಎಚ್ಚರಿಕೆ ನೀಡಿದೆ.

ಈ ಸಂಬಂಧ ರೈಲ್ವೆ ಯಾತ್ರಿಗಳ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ  ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ  ಪೀಠವು ಸೋಮವಾರ ವಿಚಾರಣೆ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.