ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧದ ಎಫ್‌ಐಆರ್ ಮತ್ತು ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾದ ಮಂಡಿಸಿದ ವಕೀಲ ಎಂ.ಅರುಣ್‌ಶ್ಯಾಮ್, ‘ಅರ್ಜಿದಾರರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ–2000ರ ಕಲಂ 66 ‘ಎ’ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಆದರೆ, ‘ಸುಪ್ರೀಂ’ ಈ ಕಲಂ ಅನ್ನು 2015ರಲ್ಲೇ ರದ್ದುಗೊಳಿಸಿದೆ. ಒತ್ತಡಕ್ಕೆಮಣಿದು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.