ADVERTISEMENT

ಸರ ದೋಚಿ ಪರಾರಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 19:30 IST
Last Updated 18 ಫೆಬ್ರುವರಿ 2012, 19:30 IST

ಬೆಂಗಳೂರು: ಮಹಿಳೆಯೊಬ್ಬರ ಚಿನ್ನದ ಸರವನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕುಮಾರಸ್ವಾಮಿಲೇಔಟ್‌ನ ಇಸ್ರೊ ಬಡಾವಣೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ರುಕ್ಮಿಣಮ್ಮ ಸರ ಕಳೆದುಕೊಂಡವರು. ಇಸ್ರೊ ಲೇಔಟ್ ನಿವಾಸಿಯಾದ ಅವರು ಚಂದ್ರಾನಗರದಲ್ಲಿ ಮನೆ ಕಟ್ಟಿಸುತ್ತಿದ್ದಾರೆ. ಚಂದ್ರಾನಗರದಿಂದ ಮನೆಗೆ ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಸರ 38 ಗ್ರಾಂ ತೂಕದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಕುಮಾರಸ್ವಾಮಿಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.