ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಿ ಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡುವಾಗಲೇ, ಈ ಬಡಾವಣೆಗೆ ಜಾಗ ಬಿಟ್ಟುಕೊಟ್ಟ ರೈತರಿಗೂ ಅಭಿವೃದ್ಧಿಪಡಿಸಿದ ನಿವೇಶನ ಹಂಚಿಕೆ ಮಾಡಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
‘ಇನ್ನು 15 ದಿನಗಳಲ್ಲಿ ರೈತರಿಗೆ ಹಂಚಿಕೆ ಆಗಬೇಕಾದ ನಿವೇಶನಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಗುರುವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಕೆಂಪೇಗೌಡ ಬಡಾವಣೆಯಲ್ಲಿ ಸಾರ್ವಜನಿಕರಿಗೆ ಹಾಗೂ ರೈತರಿಗೆ 60ಃ40 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಲು ಬಿಡಿಎ ಈ ಹಿಂದೆ ತೀರ್ಮಾನಿಸಿತ್ತು. ಸಾರ್ವಜನಿಕರಿಗೆ ₹5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಸಿದ್ಧತೆ ನಡೆಸಿದೆ. ಬಡಾವಣೆಗೆ ಜಾಗ ಬಿಟ್ಟುಕೊಟ್ಟ ರೈತರಿಗೆ ₹2 ಸಾವಿರ ನಿವೇಶನಗಳು ಲಭ್ಯವಾಗಲಿವೆ.
‘ಕೆಂಪೇಗೌಡ ಬಡಾವಣೆಯ ಮೂಲಸೌಕರ್ಯ ನಿವೇಶನಗಳಿಗೆ ಬೇಲಿ ಹಾಕಲು ಹಾಗೂ ಮೋರಿ, ಸೇತುವೆ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ₹ 51 ಕೋಟಿ ಒದಗಿಸಲು ತೀರ್ಮಾನಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.