ADVERTISEMENT

ಬರ ನಿರ್ವಹಣೆ| ಕೆರೆ ಅಭಿವೃದ್ಧಿ: ₹ 100 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2024, 15:59 IST
Last Updated 1 ಜೂನ್ 2024, 15:59 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಬೆಂಗಳೂರು: ಬರ ನಿರ್ವಹಣೆಯ ಭಾಗವಾಗಿ 93 ಕೆರೆಗಳ ಅಭಿವೃದ್ಧಿ ಮತ್ತು ಬಲವರ್ಧನೆಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಸಣ್ಣ ನೀರಾವರಿ ಇಲಾಖೆಗೆ ₹ 100 ಕೋಟಿ ಅನುದಾನವನ್ನು ಶನಿವಾರ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿನ 223 ಬರಪೀಡಿತ ತಾಲ್ಲೂಕುಗಳ ಪೈಕಿ ಆಯ್ದ ತಾಲ್ಲೂಕುಗಳ 93 ಕೆರೆಗಳ ಹೂಳು ತೆಗೆಯುವುದು, ಅಚ್ಚುಕಟ್ಟು ಪ್ರದೇಶದ ಸುಧಾರಣೆ, ಏರಿ ಬಲವರ್ಧನೆ ಮತ್ತಿತರ ಕಾಮಗಾರಿಗಳನ್ನು ಕೈಗೊಂಡು, ಮಳೆ ನೀರನ್ನು ಸಂಗ್ರಹಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಕಂದಾಯ ಇಲಾಖೆಯು ಸಣ್ಣ ನೀರಾವರಿ ಇಲಾಖೆಗೆ ಅನುದಾನ ಬಿಡುಗಡೆ ಆದೇಶದಲ್ಲಿ ಸೂಚಿಸಿದೆ.

ADVERTISEMENT

ಕೇಂದ್ರ ವಿಪತ್ತು ಪರಿಹಾರ ನಿಧಿ ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿಗಳ ಮಾರ್ಗಸೂಚಿಗಳ ಅನುಸಾರ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.