ADVERTISEMENT

ಬೆಂಗಳೂರು: ಹತ್ತು ಸಾವಿರ ವಿದ್ಯಾರ್ಥಿಗಳಿಂದ 600 ಗಣಿತ ಸೂತ್ರ ಪಠಣ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2024, 1:11 IST
Last Updated 9 ನವೆಂಬರ್ 2024, 1:11 IST
ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು
ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು   

ಬೆಂಗಳೂರು: ನಗರದ ಶ್ರೀ ಚೈತನ್ಯ ಸ್ಕೂಲ್‌ ಸಮೂಹ ಸಂಸ್ಥೆಗಳ ಹತ್ತು ಸಾವಿರ ವಿದ್ಯಾರ್ಥಿಗಳು 600 ಗಣಿತ ಸೂತ್ರಗಳನ್ನು ಪಠಣ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂದು ಚೈತನ್ಯ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಸುಷ್ಮಾ ಬೊಪ್ಪನ ತಿಳಿಸಿದ್ದಾರೆ.

ಹೈದರಾಬಾದ್‌ನ ಮಿಯಾಪುರ್‌ದಲ್ಲಿರುವ ಚೈತನ್ಯ ಫ್ಯೂಚರ್ ಪಾಥ್‌ವೇಸ್-ದಿ ನೆಕ್ಸ್ಟ್ ಜನರೇಷನ್ ಗ್ಲೋಬಲ್ ಸ್ಕೂಲ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ 20 ರಾಜ್ಯಗಳ, 120 ಶಾಖೆಗಳ ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೂರು ದಿನಗಳ ತರಬೇತಿಯೊಂದಿಗೆ ಝೂಮ್ ಲಿಂಕ್‌ಗಳ ಸಹಾಯದಿಂದ ಸೂತ್ರಗಳನ್ನು ಪಠಿಸಿದರು. ಲಂಡನ್‌ನ ಗಿನ್ನಿಸ್‌ ವರ್ಲ್ಡ್‌ ಬುಕ್ ಆಫ್‌ ರೆಕಾರ್ಡ್ಸ್‌ನ ಅಧಿಕಾರಿಗಳು ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡಿ ಪ್ರಮಾಣಪತ್ರ ನೀಡಿದರು ಎಂದು ಹೇಳಿದ್ದಾರೆ.

‘ಈ ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಬದ್ಧತೆ ಮತ್ತು ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಆತ್ಮವಿಶ್ವಾಸ ಬೆಳೆಸುವುದು ಮತ್ತು ಶಿಕ್ಷಣ ಪ್ರಾರಂಭದಲ್ಲಿ ಒತ್ತಡವಿಲ್ಲದೆ ವಿದ್ಯಾರ್ಥಿಗಳು ಯಶಸ್ಸು ಸಾಧಿಸುವಂತೆ ನೋಡಿಕೊಳ್ಳುವುದು ನಮ್ಮ ಗುರಿ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.