ADVERTISEMENT

ಪರಿಸರ ಸಂರಕ್ಷಣೆಗಾಗಿ 1,118 ಬಿಎಂಟಿಟಿ ಬಸ್‌ಗಳ ನಿಷ್ಕ್ರಿಯ

​ಪ್ರಜಾವಾಣಿ ವಾರ್ತೆ
Published 5 ಜೂನ್ 2023, 20:31 IST
Last Updated 5 ಜೂನ್ 2023, 20:31 IST
ವಿಶ್ವ ಪರಿಸರ ದಿನದ ಪ್ರಯುಕ್ತ ಬಿಎಂಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ಸೋಮವಾರ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ. ಗಿಡ ನೆಟ್ಟು ನೀರುಣಿಸಿದರು
ವಿಶ್ವ ಪರಿಸರ ದಿನದ ಪ್ರಯುಕ್ತ ಬಿಎಂಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ಸೋಮವಾರ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ. ಗಿಡ ನೆಟ್ಟು ನೀರುಣಿಸಿದರು   

ಬೆಂಗಳೂರು: ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಈ ವರ್ಷ ಬಿಎಂಟಿಸಿಯ 1,118 ಹಳೇ ಬಸ್‌ಗಳನ್ನು ನಿಷ್ಕ್ರಿಯ ಗೊಳಿಸಲಾಗುವುದು. ಅದರಲ್ಲಿ 146 ಬಸ್‌ಗಳನ್ನು ಈಗಾಗಲೇ ನಿಷ್ಕ್ರಿಯಗೊಳಿಸಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ. ತಿಳಿಸಿದರು.

ವಿಶ್ವ ಪರಿಸರ ದಿನದ ಪ್ರಯುಕ್ತ ಬಿಎಂಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ಸೋಮವಾರ ಗಿಡ ನೆಟ್ಟು ನೀರುಣಿಸಿ ಅವರು ಮಾತನಾಡಿದರು.

ಕಳೆದ ವರ್ಷ 485 ಬಸ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಈ ವರ್ಷ ಕಡಿಮೆ ಹೊಗೆ ಸೂಸುವ 1643 ಬಸ್‌ಗಳನ್ನು ಖರೀದಿಸಲಾಗುವುದು. ಗುತ್ತಿಗೆ ಆಧಾರದಲ್ಲಿ 323 ಎಲೆಕ್ಟ್ರಿಕಲ್‌ ಬಸ್‌ಗಳು ಓಡುತ್ತಿವೆ. ಈ ವರ್ಷ 1,050 ಎಲೆಕ್ಟ್ರಿಕ್‌ ಬಸ್‌ಗಳನ್ನು ಓಡಿಸಲಾಗುವುದು ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.