ಬೆಂಗಳೂರು: ಸೆ. 26ರಂದು ಕಾವೇರಿ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಇದರ ಬೆನ್ನಲ್ಲೇ ನಗರದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ. ದಯಾನಂದ್, ‘ಹೈಕೋರ್ಟ್ ಆದೇಶದನ್ವಯ ನಗರದಲ್ಲಿ ಪ್ರತಿಭಟನೆ ಹಾಗೂ ಬಂದ್‌ಗೆ ಅವಕಾಶವಿಲ್ಲ. ಹೀಗಾಗಿ, ಸೆ. 26ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದರು.
‘ಸೆ. 25ರಂದು ರಾತ್ರಿ 12 ಗಂಟೆಯಿಂದ ಸೆ. 26ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಜನರು ಗುಂಪು ಸೇರುವುದು ಕಾನೂನು ಬಾಹಿರ. ಒತ್ತಾಯದಿಂದ ಬಂದ್ ಮಾಡಲು ಪ್ರಯತ್ನಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.
‘60 ಕೆಎಸ್‌ಆರ್‌ಪಿ ತುಕಡಿ, 40 ಸಿಎಆರ್ ತುಕಡಿ ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗಡಿಭಾಗದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ. ತಮಿಳುನಾಡು ಬಸ್‌ಗಳಿಗೂ ಭದ್ರತೆ ನೀಡಲು ಸಿದ್ಧರಿದ್ದೇವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.