ADVERTISEMENT

ಕಸ ಗುತ್ತಿಗೆಯಿಂದ ₹15 ಸಾವಿರ ಕೋಟಿ ಕಮಿಷನ್‌: ಎಚ್‌ಡಿಕೆ ಆರೋಪ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 19:37 IST
Last Updated 13 ಜುಲೈ 2024, 19:37 IST
<div class="paragraphs"><p>&nbsp;ಎಚ್‌ಡಿಕೆ</p></div>

 ಎಚ್‌ಡಿಕೆ

   

ಬೆಂಗಳೂರು: ‘ರಾಜ್ಯ ಸರ್ಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವ ಗುತ್ತಿಗೆಯಿಂದ ₹15 ಸಾವಿರ ಕೋಟಿ ಕಮಿಷನ್‌ ಕಬಳಿಸಲು ಹೊರಟಿದೆ’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘30 ವರ್ಷಗಳವರೆಗೆ ನಾವು ಇರುತ್ತೇವೋ ಇಲ್ಲವೋ ಗೊತ್ತಿಲ್ಲ. ಆದರೆ 30 ವರ್ಷಗಳ ಅವಧಿಗೆ ಗುತ್ತಿಗೆಯನ್ನು ಒಂದೇ ಕಂಪನಿಗೆ ಒಮ್ಮೆಗೇ ನೀಡಲಾಗುತ್ತಿದೆ. ಇದರಲ್ಲಿ ಎಷ್ಟು ಕಮಿಷನ್‌ ದೊರೆಯುತ್ತಿದೆ’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ADVERTISEMENT

‘ಗ್ರೇಟರ್‌ ಬೆಂಗಳೂರು ಮಾಡಲು ಯೋಜನೆ ರೂಪಿಸಲಾಗುತ್ತಿದೆ. ರೈಟ್ಸ್‌ ಎಂಬ ಕಂಪನಿಗೆ ಈ ಗುತ್ತಿಗೆ ದೊರೆತಿದೆ. ಕಪ್ಪುಪಟ್ಟಿಯಲ್ಲಿರುವ  ಈ ಕಂಪನಿಯಿಂದ ಯೋಜನೆ ರೂಪಿಸಿ ₹45 ಸಾವಿರ ಕೋಟಿ ಮೊತ್ತದ ಗುತ್ತಿಗೆ ನೀಡಲಾಗುತ್ತಿದೆ’ ಎಂದು ಅವರು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.