ADVERTISEMENT

ಬೆಂಗಳೂರು: 200 ಅಕ್ರಮ ಕಟ್ಟಡ ತೆರವು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2024, 16:18 IST
Last Updated 4 ನವೆಂಬರ್ 2024, 16:18 IST
ತುಷಾರ್‌ ಗಿರಿನಾಥ್‌
ತುಷಾರ್‌ ಗಿರಿನಾಥ್‌   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುಮಾರು 200 ಕಟ್ಟಡಗಳು ನಿಯಮಗಳನ್ನು ಉಲ್ಲಂಘಿಸಿದ್ದು, ಅವುಗಳನ್ನು ಶೀಘ್ರ ತೆರವು ಮಾಡಲಾಗುತ್ತದೆ ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ಕಿರಿಯ ಹಾಗೂ ಸಹಾಯಕ ಎಂಜಿನಿಯರ್‌ಗಳು ಸೇರಿದಂತೆ ಹೊರ ಗುತ್ತಿಗೆ ಆಧಾರದಲ್ಲಿ 70 ಸಿಬ್ಬಂದಿಯನ್ನು ನೇಮಿಸಿಕೊಂಡು ಅಕ್ರಮ ಕಟ್ಟಡಗಳ ಸಮೀಕ್ಷೆ ನಡೆಸಲಾಗುತ್ತಿದೆ. ಮಹದೇಪುರದಲ್ಲಿ 65 ಹಾಗೂ ಪಶ್ಚಿಮ ವಲಯದಲ್ಲಿ 27 ಕಟ್ಟಡಗಳು ಅಕ್ರಮವಾಗಿ ನಿರ್ಮಾಣವಾಗುತ್ತವೆ ಎಂಬ ವರದಿ ಬಂದಿದೆ ಎಂದು ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿದರು.

ಎಲ್ಲ ವಲಯದ ಮಾಹಿತಿಯ ವರದಿ ಮಂಗಳವಾರದವರೆಗೆ ಬರಲಿದೆ. ಸುಮಾರು 200 ಕಟ್ಟಡಗಳು ನಿಯಮ ಉಲ್ಲಂಘಿಸಿವೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.