ಬೆಂಗಳೂರು: ನಿರ್ಭಯಾ ನಿಧಿ ಯೋಜನೆ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ನೀಡಿದ್ದ ನೋಟಿಸ್‌ಗೆ ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಐದು ಪುಟಗಳ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಇಎಲ್ ಸಂಸ್ಥೆ ಪ್ರಧಾನಿ ಕಚೇರಿಗೆ ನೀಡಿದ್ದ ದೂರು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯೊಂದು ಗೃಹ ಇಲಾಖೆಗೆ ನೀಡಿದ್ದ ದೂರುಗಳನ್ನು ಆಧರಿಸಿ ರೂಪಾ ಈ ಉತ್ತರ ನೀಡಿದ್ದಾರೆ. ಕೆಲವು ಪ್ರಶ್ನೆಗಳಿಗೆ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ. ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.