ADVERTISEMENT

‘ಚುಟುಕು ಸಾಹಿತ್ಯದಲ್ಲಿ ಗಂಭೀರ ಚಿಂತನೆಯೂ ಇರಲಿ’

​ಪ್ರಜಾವಾಣಿ ವಾರ್ತೆ
Published 14 ಜನವರಿ 2018, 19:39 IST
Last Updated 14 ಜನವರಿ 2018, 19:39 IST
ಸಮ್ಮೇಳನವನ್ನು ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಉದ್ಘಾಟಿಸಿದರು. ಹುಲಿಕಲ್ ನಟರಾಜ್, ಬಾಗೇಪಲ್ಲಿ ಕೃಷ್ಣಮೂರ್ತಿ ಹಾಗೂ ಮಂಜುನಾಥ ಗೌಡ ಇದ್ದಾರೆ
ಸಮ್ಮೇಳನವನ್ನು ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಉದ್ಘಾಟಿಸಿದರು. ಹುಲಿಕಲ್ ನಟರಾಜ್, ಬಾಗೇಪಲ್ಲಿ ಕೃಷ್ಣಮೂರ್ತಿ ಹಾಗೂ ಮಂಜುನಾಥ ಗೌಡ ಇದ್ದಾರೆ   

ಹೊಸಕೋಟೆ: ಮನರಂಜನೆಯ ಉದ್ದೇಶದಿಂದ ಚುಟುಕು ಸಾಹಿತ್ಯ ರಚಿಸುವವರು ಹೆಚ್ಚಾಗಿದ್ದಾರೆ. ಆದರೆ, ಗಂಭೀರ ಚಿಂತನೆಗಳನ್ನು ಚುಟುಕುಗಳ ಮೂಲಕ ವ್ಯಕ್ತಪಡಿಸುವ ಅಗತ್ಯವಿದೆ ಎಂದು ಸಾಹಿತಿ ಬಾಗೇಪಲ್ಲಿ ಕೃಷ್ಣಮೂರ್ತಿ ಹೇಳಿದರು.

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್‌ನ ತಾಲ್ಲೂಕು ಘಟಕದ ವತಿಯಿಂದ ತಾಲ್ಲೂಕಿನ ನಂದಗುಡಿ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ‘ತಾಲ್ಲೂಕು ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನ’ದಲ್ಲಿ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಹಿತ್ಯವಿಲ್ಲದ ಜೀವನ ಪರಿಪೂರ್ಣವಲ್ಲ. ಪ್ರತಿಯೊಬ್ಬರೂ ಸಾಹಿತ್ಯ ಅಭ್ಯಾಸ ಮಾಡುವುದರಿಂದ ಬದುಕು ಸುಂದರವಾಗುತ್ತದೆ ಎಂದರು.

ADVERTISEMENT

ರಾಜ್ಯ ವಿಜ್ಞಾನ ಪರಿಷತ್‌ನ ಉಪಾಧ್ಯಕ್ಷ ಹುಲಿಕಲ್ ನಟರಾಜ್, ‘ಕುವೆಂಪು ಅವರ ವಿಚಾರಧಾರೆಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಈ ಮೂಲಕ ವಿಶ್ವಮಾನವರಾಗಬೇಕು’ ಎಂದು ಹೇಳಿದರು.

ಇದೇ ವೇಳೆ ಕುವೆಂಪು ಅವರ ಜನ್ಮ ಶತಮಾನೋತ್ಸವವೂ ನಡೆಯಿತು. ಇದಕ್ಕೂ ಮುನ್ನ ಸಮ್ಮೇಳನದ
ಅಧ್ಯಕ್ಷರನ್ನು ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.