ADVERTISEMENT

ದೇಶದಲ್ಲಿ 700 ಕಿ.ಮೀ. ಮೆಟ್ರೊ ಜಾಲ: ಸಚಿವ ಹರ್ದೀಪ್ ಸಿಂಗ್ ಪುರಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2021, 12:19 IST
Last Updated 14 ಜನವರಿ 2021, 12:19 IST
ರೀಚ್ 4ಬಿ ವಿಸ್ತರಿತ ಮಾರ್ಗಕ್ಕೆ ಚಾಲನೆ
ರೀಚ್ 4ಬಿ ವಿಸ್ತರಿತ ಮಾರ್ಗಕ್ಕೆ ಚಾಲನೆ   

ಬೆಂಗಳೂರು: 'ನಮ್ಮ ಮೆಟ್ರೊ'ದಲ್ಲಿ ಕೋಣನಕುಂಟೆ ಕ್ರಾಸ್ ನಿಂದ ರೇಷ್ಮೆ ಸಂಸ್ಥೆಯವರೆಗೆ 6 ಕಿ.ಮೀ. ಮೆಟ್ರೊ ರೈಲು ಮಾರ್ಗ ವಿಸ್ತರಿಸುವುದರೊಂದಿಗೆ ದೇಶದ 18 ಜಿಲ್ಲೆಗಳಲ್ಲಿ 700 ಕಿ.ಮೀ. ಮೆಟ್ರೊ ಜಾಲ ರೂಪಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ರಾಜ್ಯ ಸಚಿವ ಹರ್ ದೀಪ್ ಸಿಂಗ್ ಪುರಿ ಹೇಳಿದರು.

ನಗರದಲ್ಲಿ ಗುರುವಾರ ರೀಚ್ 4ಬಿ ವಿಸ್ತರಿತ ಮಾರ್ಗಕ್ಕೆ ಚಾಲನೆ ನೀಡಿದ ಅವರು, 'ಸಿಲ್ಕ್ ಬೋರ್ಡ್ ನಿಂದ ವಿಮಾನ ನಿಲ್ದಾಣದವರೆಗೆ ಮೆಟ್ರೊ ಮಾರ್ಗ ನಿರ್ಮಾಣಕ್ಕಾಗಿ ಸಾರ್ವಜನಿಕ ಹೂಡಿಕೆ ಮಂಡಳಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ' ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, '2025ರ ವೇಳೆಗೆ ಬೆಂಗಳೂರಿನಲ್ಲಿ 172 ಕಿ.ಮೀ. ಮೆಟ್ರೊ ಜಾಲ ನಿರ್ಮಿಸಲಾಗುವುದು' ಎಂದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.