ADVERTISEMENT

ನೆಟೆ ರೋಗ: ಯಾದಗಿರಿ, ಬೀದರ್‌ ಸೇರಿ 4 ಜಿಲ್ಲೆಗಳಿಗೆ ₹ 74 ಕೋಟಿ ಪರಿಹಾರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2023, 14:19 IST
Last Updated 24 ನವೆಂಬರ್ 2023, 14:19 IST
<div class="paragraphs"><p>ತೊಗರಿ ಬೆಳೆಗೆ ನೆಟೆ ರೋಗ ತಗುಲಿದೆ</p></div>

ತೊಗರಿ ಬೆಳೆಗೆ ನೆಟೆ ರೋಗ ತಗುಲಿದೆ

   

ಬೆಂಗಳೂರು: ಕಲಬುರಗಿ, ಯಾದಗಿರಿ, ಬೀದರ್‌ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಹಾನಿಯಾಗಿ ನಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ವಿತರಿಸಲು ₹ 74.67 ಕೋಟಿ ಬಿಡುಗಡೆ ಮಾಡಿ ಕೃಷಿ ಇಲಾಖೆಯು ಮಂಗಳವಾರ ಆದೇಶ ಹೊರಡಿಸಿದೆ.

ನಾಲ್ಕು ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಬೆಳೆ ಹಾನಿಯಾದ ಪ್ರಕರಣಗಳಲ್ಲಿ ಪರಿಹಾರ ವಿತರಣೆಗೆ ₹ 233 ಕೋಟಿ ಒದಗಿಸಲು ನಿರ್ಧರಿಸಲಾಗಿತ್ತು. ಮೊದಲ ಎರಡು ಕಂತುಗಳಲ್ಲಿ ₹ 148.33 ಕೋಟಿ ಒದಗಿಸಲಾಗಿತ್ತು. ಮೂರನೇ ಕಂತಿನಲ್ಲಿ ₹ 74.67 ಕೋಟಿ ಅನುದಾನ ಒದಗಿಸಲಾಗಿದೆ.

ADVERTISEMENT

ಅರ್ಹ ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಹಣ ಪಾವತಿಸಲಾಗುವುದು ಎಂದು ಕೃಷಿ ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.