ADVERTISEMENT

75ನೇ ಗಣರಾಜ್ಯೋತ್ಸವ | ದೇಶದ ಏಳಿಗೆಗೆ ಸಹಕರಿಸಿ –ಶಾಸಕ ಎಸ್‌.ಆರ್‌.ವಿಶ್ವನಾಥ್‌

​ಪ್ರಜಾವಾಣಿ ವಾರ್ತೆ
Published 26 ಜನವರಿ 2024, 22:40 IST
Last Updated 26 ಜನವರಿ 2024, 22:40 IST
<div class="paragraphs"><p>ಉತ್ತರಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ನೃತ್ಯ ನಾಟಕವನ್ನು ಗುರುವಾರ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 74 ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶನ ನೀಡಿದರು.</p></div>

ಉತ್ತರಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ನೃತ್ಯ ನಾಟಕವನ್ನು ಗುರುವಾರ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 74 ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶನ ನೀಡಿದರು.

   

ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.

ಯಲಹಂಕ: ‘ಬಿ.ಆರ್‌.ಅಂಬೇಡ್ಕರ್‌ ಅವರು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ರಚಿಸಿ, ಭಾರತೀಯರಿಗೆ ಅರ್ಪಣೆ ಮಾಡಿದ ಈ ದಿನ, ನಮ್ಮೆಲ್ಲರಿಗೂ ಸಂಭ್ರಮದ ದಿನವಾಗಿದೆ’ ಎಂದು ಶಾಸಕ ಎಸ್‌.ಆರ್‌.ವಿಶ್ವನಾಥ್‌ ಹೇಳಿದರು.

ADVERTISEMENT

ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಉಪ ನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

‘ದೇಶದ ಬಗ್ಗೆ ಪ್ರೇಮ, ಗೌರವ ಹಾಗೂ ಸಮರ್ಪಣಾ ಮನೋಭಾವ ಬೆಳೆಸಿಕೊಂಡು ದೇಶದ ಏಳಿಗೆಗೆ ಸಹಕರಿಸಬೇಕು’ ಎಂದರು.

ತಹಶೀಲ್ದಾರ್‌ ಅನಿಲ್‌ಕುಮಾರ್‌ ಅರೋಲಿಕರ್‌ ಧ್ವಜಾರೋಹಣ ನೆರವೇರಿಸಿದರು.

ಪೊಲೀಸ್‌, ಎನ್‌ಸಿಸಿ, ಭಾರತ ಸೇವಾದಳ ಸ್ಕೌಟ್‌ ಆ್ಯಂಡ್‌ ಗೈಡ್ಸ್‌, ವಿದ್ಯಾರ್ಥಿಗಳು ಹಾಗೂ ವಾದ್ಯಗೋಷ್ಠಿ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ವಿವಿಧ ಶಾಲೆಗಳ 3 ಸಾವಿರಕ್ಕೂ ಹೆಚ್ಚು ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕ್ರಿಕೆಟ್‌ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.