ADVERTISEMENT

8, 9ರಂದು ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 20:05 IST
Last Updated 5 ಮಾರ್ಚ್ 2018, 20:05 IST
8, 9ರಂದು ಸಾಹಿತ್ಯ ಸಮ್ಮೇಳನ
8, 9ರಂದು ಸಾಹಿತ್ಯ ಸಮ್ಮೇಳನ   

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 13ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ 8 ಮತ್ತು 9 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಾಹಿತಿ ಡಾ. ಬೈರಮಂಗಲ ರಾಮೇಗೌಡ ತಿಳಿಸಿದರು.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಗಡಿ ರಸ್ತೆಯ ಸೀಗೇಹಳ್ಳಿ ಗೇಟ್‌ ಬಳಿಯ ಎಸ್‌.ಜಿ.ಕಲ್ಯಾಣ ಮಂಟಪದಲ್ಲಿ ಸಮ್ಮೇಳನ ನಡೆಯಲಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ’ ಎಂದರು.

‘ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಕಳೆದ ವರ್ಷ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೆಲವರು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಆದರೆ, ಸಾಹಿತಿಗಳನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಪರಿಷತ್ತಿನಲ್ಲಿ ನಿಯಮವಿಲ್ಲ. ಕನ್ನಡ ನಾಡು, ನುಡಿಗಾಗಿ ಸೇವೆ ಸಲ್ಲಿಸಿದ ಯಾರನ್ನು ಬೇಕಾದರೂ ಆಯ್ಕೆ ಮಾಡಬಹುದು’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಮಾಗಡಿ ರಸ್ತೆ ಹಾಗೂ ನೈಸ್‌ ರಸ್ತೆ ಕೂಡುವಲ್ಲಿ 8ರಂದು ಬೆಳಿಗ್ಗೆ 8ಗಂಟೆಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕನ್ನಡ ಜಾಗೃತಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವಿಚಾರಗೋಷ್ಠಿ, ವಿದ್ಯಾರ್ಥಿ ಮತ್ತು ಯುವ ಗೋಷ್ಠಿ, ಸಂಗೀತ, ನೃತ್ಯ, ನಾಟಕ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮ್ಮೇಳನದಲ್ಲಿ ಇರಲಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.