ಬೆಂಗಳೂರು: ನಗರದಲ್ಲಿ 2019ರ ಜನವರಿಯಿಂದ ಡಿಸೆಂಬರ್‌ವರೆಗಿನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಹಾಗೂ ವಿಧಿಸಲಾದ ದಂಡದ ಕುರಿತ ಅಂಕಿ–ಅಂಶವನ್ನು ನಗರದ ಪೊಲೀಸರು ಬಿಡುಗಡೆ ಮಾಡಿದ್ದಾರೆ.
‘2018ಕ್ಕೆ ಹೋಲಿಸಿದರೆ 2019ರಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಆದರೆ, ದಂಡದ ಸಂಗ್ರಹ ಮಾತ್ರ ಸ್ವಲ್ಪ ಜಾಸ್ತಿ ಆಗಿದೆ’ ಎಂದು ಸಂಚಾರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
‘2018ರಲ್ಲಿ 83.89 ಲಕ್ಷವಿದ್ದ ಪ್ರಕರಣಗಳು 2019ರಲ್ಲಿ 79.87 ಲಕ್ಷ ಆಗಿವೆ. ₹ 81.25 ಕೋಟಿ ಇದ್ದ ದಂಡ ₹ 89.18 ಕೋಟಿಗೆ ಹೆಚ್ಚಾಗಿದೆ’ ಎಂದು ಅವರು ತಿಳಿಸಿದರು.
ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷತೆ ದೊಡ್ಡ ಸವಾಲಾಗಿ ಮಾರ್ಪಡುತ್ತಿದೆ. ಈ ಸಮಸ್ಯೆ ಪರಿಹರಿಸಲು ಎಲ್ಲರೂ ಸಹಕಾರ ಅಗತ್ಯ ಎಂದುಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತಬಿ.ಆರ್.ರವಿಕಾಂತೇಗೌಡ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.