ಬೆಂಗಳೂರು: ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಯತ್ತ ಹೊರಟಿದ್ದ ಯುವಕನ ಮೇಲೆ ತಿಗಳರಪಾಳ್ಯ 14ನೇ ಅಡ್ಡರಸ್ತೆಯಲ್ಲಿ ಕಾರಿನ ಚಕ್ರ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಾಗೇಪಲ್ಲಿಯ ಶಶಿಕುಮಾರ್(20) ಮೃತ ಯುವಕ.
ಶಶಿಕುಮಾರ್ ಅವರು ಪೀಣ್ಯ ಬಳಿಯ ಕಾರ್ಖಾನೆಯಲ್ಲಿ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಪಾಳಿ ಇತ್ತು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ವೇಗವಾಗಿ ಬೈಕ್ ಓಡಿಸಿಕೊಂಡು ಬರುತ್ತಿದ್ದರು. ಬೈಕ್ ನಿಯಂತ್ರಣ ತಪ್ಪಿದ್ದರಿಂದ ಸವಾರ ಕೆಳಕ್ಕೆ ಬಿದ್ದಿದ್ದರು. ಅದೇ ಮಾರ್ಗವಾಗಿ ಬರುತ್ತಿದ್ದ ಕಾರಿನ ಚಕ್ರಗಳು ಸವಾರನ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.
‘ಕಾರನ್ನು ಚಾಲಕ ನಿಲ್ಲಿಸದೇ ತೆರಳಿದ್ದಾನೆ. ಆ ಮಾರ್ಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗಿದೆ. ಯುವಕನ ಮೇಲೆ ಹರಿದ ಕಾರು ಬಿಳಿ ಬಣ್ಣದ್ದು ಎಂಬುದು ಗೊತ್ತಾಗಿದೆ. ಕಾರಿನ ನೋಂದಣಿ ಸಂಖ್ಯೆಯನ್ನು ಪತ್ತೆ ಮಾಡಲಾಗುತ್ತಿದೆ. ಉದ್ದೇಶ ಪೂರ್ವಕವಾಗಿಯೇ ಬೈಕ್ ಸವಾರನ ಮೇಲೆ ಕಾರು ಹರಿಸಲಾಗಿದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.
ಕಲಾಸಿಪಾಳ್ಯ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.