ಬೆಂಗಳೂರು: ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಹಾಗೂ ಪೋಷಕರ ನಡುವೆ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸಲು ಆಮ್ ಆದ್ಮಿ ಪಕ್ಷವು ಮೂರು ಅಂಶಗಳ ಸೂತ್ರವನ್ನು ಸೂಚಿಸಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿರೆಡ್ಡಿ, ಆನ್‌ಲೈನ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು.
‘₹50 ಸಾವಿರದವರೆಗೆ ಶುಲ್ಕ ಪಡೆಯುವ ಬಜೆಟ್ ಶಾಲೆಗಳಲ್ಲಿ ಅನೇಕರು ವ್ಯಾಸಂಗ ಮಾಡುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಸರ್ಕಾರವು ಕನಿಷ್ಠ₹15 ಸಾವಿರ ಶಿಷ್ಯವೇತನ ನೀಡಬೇಕು. ಅಥವಾ ಆ ಶಾಲೆಗಳ ಶಿಕ್ಷಕರಿಗೆ ಅನುದಾನಿತ ಶಾಲಾ ಶಿಕ್ಷಕರ ರೀತಿಯಲ್ಲೇ ವೇತನ ಭತ್ಯೆಗಳನ್ನು ಒದಗಿಸಬೇಕು’ ಎಂದರು.
‘ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್, ಟ್ಯಾಬ್ ಖರೀದಿಸಲು ಬಡ್ಡಿರಹಿತ ಸಾಲ ನೀಡುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಇದರ ಜೊತೆಗೆ ಪೋಷಕರು, ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಸ್ಥಳೀಯ ನಾಗರಿಕ ಸಂಘಗಳ ಸದಸ್ಯರನ್ನೊಳಗೊಂಡ ಶಾಲಾ ನಿರ್ವಹಣಾ ಸಮಿತಿ ರಚಿಸಿ, ಅದಕ್ಕೆ ಸಾಂವಿಧಾನಿಕ ಹಕ್ಕು ನೀಡಬೇಕು. ಈ ಪರಿಹಾರ ಸೂತ್ರಗಳನ್ನು ಕೂಡಲೇ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.