ADVERTISEMENT

ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ: ಎಎಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 14:58 IST
Last Updated 29 ಜೂನ್ 2024, 14:58 IST
<div class="paragraphs"><p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಎಎಪಿ ಕಾರ್ಯಕರ್ತರು ಭಾಗವಹಿಸಿದ್ದರು </p></div>

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಎಎಪಿ ಕಾರ್ಯಕರ್ತರು ಭಾಗವಹಿಸಿದ್ದರು

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಇಡಿ, ಸಿಬಿಐ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರ ನಿರಂತರ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ’ ಎಂದು ಆರೋಪಿಸಿ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ADVERTISEMENT

ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ‘ಕೇಂದ್ರ ಸರ್ಕಾರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಕಳುಹಿಸಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಎದುರಾಳಿಗಳನ್ನು ಮುಗಿಸಲು ಸಂಚು ಮಾಡುತ್ತಿದೆ ಎಂದು’ ಆರೋಪಿಸಿದರು. ‌

‘ಅರವಿಂದ ಕೇಜ್ರಿವಾಲ್ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದರೂ, ಎರಡು ವರ್ಷದ ಬಳಿಕ ಅವರನ್ನು ಏಕಾಏಕಿ ಬಂಧಿಸಲಾಯಿತು. ತನಿಖಾ ಸಂಸ್ಥೆಗಳು ಈ ರೀತಿ ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡಿದರೆ, ನೀಟ್‌ ರೀತಿಯ ಹಗರಣಗಳಿಗೆ ನ್ಯಾಯ ಸಿಗುತ್ತದೆಯೇ’ ಎಂದು ಪ್ರಶ್ನಿಸಿದರು.

ಎಎಪಿ ರಾಜ್ಯ ಘಟಕದ ಉಪಾಧ್ಯಕ್ಷ ಸುರೇಶ್ ರಾಥೋಡ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಸತೀಶ್ ಕುಮಾರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಫರೀದ್, ಬಸವರಾಜ ಮುದೀಗೌಡರ್, ರವಿಕುಮಾರ್, ಉಷಾ ಮೋಹನ್, ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.