ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಬಿಎಂಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಕೆಂಗೇರಿ ಸಮೀಪದ ಕನಕಶ್ರೀ ಲೇಔಟ್ನ ಡಿ.ಕೆ. ಆನಂದ್(36) ಮೃತಪಟ್ಟವರು.
ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ಬಿಎಂಟಿಸಿ ಬಸ್ವೊಂದು ಶಿರ್ಕೆಯಿಂದ ಜಯನಗರದ ಕಡೆಗೆ ಚಲಿಸುತ್ತಿತ್ತು. ಮಡಿವಾಳಕ್ಕೆ ತೆರಳಿದ್ದ ಆನಂದ್ ಅವರು ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಅದೇ ಮಾರ್ಗವಾಗಿ ಮನೆಗೆ ಬರುತ್ತಿದ್ದರು. ಆ ಸಂದರ್ಭದಲ್ಲಿ ಅಪಘಾತ ಸಂಭವಿಸಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ಹೇಳಿದರು.
ಬಸ್ ಚಾಲಕ ಮಾದೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.
‘ವಿಷ್ಣುವರ್ಧನ್ ರಸ್ತೆ ಬಿಜಿಎಸ್ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಸವಾರ ಆನಂದ್ ಅವರು ದ್ವಿಮುಖ ಸಂಚಾರದ ರಸ್ತೆಯಲ್ಲಿ ತನ್ನ ಎಡಭಾಗದ ವಾಹನವನ್ನು ಹಿಂದಿಕ್ಕಲು ಹೋಗಿ ಎದುರು ಪಥದ ರಸ್ತೆಗೆ ಚಲಿಸಿ, ಎದುರಿನಿಂದ ಬರುತ್ತಿದ್ದ ಬಸ್ಗೆ ಸ್ವಯಂ ಡಿಕ್ಕಿ ಹೊಡೆದಿದ್ದಾರೆ’ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.