ಬೆಂಗಳೂರು: ನೈಸ್ ರಸ್ತೆಯ ಕೊಮ್ಮಘಟ್ಟ ಮೇಲ್ಸೇತುವೆ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿಯ ಹರಿಹರನ್(30) ಮೃತ ಚಾಲಕ. ಶುಕ್ರವಾರ ರಾತ್ರಿ ಮೂರು ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.
‘ಮಾಗಡಿ ಕಡೆಯಿಂದ ಬರುತ್ತಿದ್ದ ಟಿಪ್ಪರ್ಗೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಟಿಪ್ಪರ್ ಡಿಕ್ಕಿ ಹೊಡೆದಿದೆ. ಅದೇ ಮಾರ್ಗದಲ್ಲಿ ಬರುತ್ತಿದ್ದ ಐಷರ್ ವಾಹನವು ಟಿಪ್ಪರ್ಗೆ ಡಿಕ್ಕಿ ಹೊಡೆದು, ಚಾಲಕ ಹರಿಹರನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ವಾಹನಗಳು ಚಲಿಸುವಾಗಲೇ ಈ ಸರಣಿ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಮೊದಲ ಟಿಪ್ಪರ್ ವಾಹನದ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಎರಡನೇ ಟಿಪ್ಪರ್ ವಾಹನ ಹಾಗೂ ಐಷರ್ ವಾಹನ ಜಪ್ತಿ ಮಾಡಲಾಗಿದೆ’ ಎಂದು ಸಂಚಾರ ಪೊಲೀಸರು ಹೇಳಿದರು. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.