ADVERTISEMENT

ನಟಿ ಸುಧಾರಾಣಿ ಚಿಕಿತ್ಸೆಗೆ ತಡ ಮಾಡಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸುಧಾಕರ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 11:33 IST
Last Updated 28 ಜುಲೈ 2020, 11:33 IST
ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್   

ಬೆಂಗಳೂರು: ನಟಿ ಸುಧಾರಾಣಿ ಅವರಿಗೆ ಚಿಕಿತ್ಸೆ ನೀಡಲು ತಡಮಾಡಿದ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆ ವಿರುದ್ಧ ಕ್ರಮವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

'ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ನೋಡಿದೆ. ಅವರಷ್ಟೇ ಅಲ್ಲ, ಯಾರೊಬ್ಬರೂ ಚಿಕಿತ್ಸೆ ಸಿಗದೆ ಪರದಾಡಬಾರದು' ಎಂದು ಸಚಿವರು ಹೇಳಿದ್ದಾರೆ.

ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ತಗುಲಿದ್ದು ಅವರು ಮತ್ತೊಮ್ಮೆ ಕ್ವಾರಂಟೈನ್ ಆಗಬೇಕಿದೆ ಎಂಬ ವರದಿಗಳ ಕುರಿತು ಸ್ಪಷ್ಟನೆ ನೀಡಿರುವ ಅವರು, 'ನಾನು ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಹೀಗಾಗಿ ಕ್ವಾರಂಟೈನ್ ಆಗುವ ಅಗತ್ಯವಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.