ADVERTISEMENT

ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆ ಮೇಲೆ ದಾಳಿ: ಕಾನೂನು ಕ್ರಮ ಖಚಿತವೆಂದ ಡಿಕೆಶಿ

​ಪ್ರಜಾವಾಣಿ ವಾರ್ತೆ
Published 27 ಮೇ 2024, 16:09 IST
Last Updated 27 ಮೇ 2024, 16:09 IST
<div class="paragraphs"><p>ಡಿ.ಕೆ. ಶಿವಕುಮಾರ್‌</p></div>

ಡಿ.ಕೆ. ಶಿವಕುಮಾರ್‌

   

ಬೆಂಗಳೂರು: ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

‘ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರನ್ನು ರಾಜ್ಯ ಸರ್ಕಾರ ರಕ್ಷಿಸುತ್ತಿದೆ’ ಎಂಬ ಆರೋಪ ಕುರಿತು ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ’ ಎಂದರು.

ADVERTISEMENT

ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಯವರು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರದ ನಿಲುವು ಅಚಲ. ಗೃಹ ಸಚಿವರು ಈಗಾಗಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.