ಬೆಂಗಳೂರು: ‘ನನ್ನ ಹೋರಾಟ ಭೇದ–ಭಾವ, ಅಸಮಾನತೆಗಳ ವಿರುದ್ಧವೇ ಹೊರತು ಯಾವುದೇ ಜಾತಿ, ಜನಾಂಗದ ವಿರುದ್ಧವಲ್ಲ. ನನ್ನ ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ’ ಎಂದು ನಟ ಚೇತನ್ ತಿಳಿಸಿದರು.
ಬ್ರಾಹ್ಮಣ್ಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕರಣ ಸಂಬಂಧ ಬಸವನಗುಡಿ ಠಾಣೆಯಲ್ಲಿ ಬುಧವಾರ ವಿಚಾರಣೆಗೆ ಅವರು ಹಾಜರಾದರು.
ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಎಂಬುವರು ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ವಿಚಾರಣೆಗೆ ಬರುವಂತೆ ಚೇತನ್ ಅವರಿಗೆ ನೋಟಿಸ್ ನೀಡಿದ್ದರು.
ವಿಚಾರಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಾನು ಜಾತಿಯ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಹುಟ್ಟಿದ ತಕ್ಷಣವೇ ಶ್ರೇಷ್ಠ ಹಾಗೂ ಕನಿಷ್ಠ ಎನ್ನುವ ಮನಸ್ಥಿತಿ ಹಾಗೂ ವ್ಯವಸ್ಥೆಯ ವಿರುದ್ಧ ಹೋರಾಟ ಮುಂದುವರಿಯಲಿದೆ. ಪ್ರಕರಣದ ತನಿಖೆಗೆ ಸಹಕರಿಸುತ್ತೇನೆ’ ಎಂದೂ ಹೇಳಿದರು.
ಇದನ್ನೂ ಓದಿ... ಬ್ರಾಹ್ಮಣ್ಯದ ಅವಹೇಳನ; ನಟ ಚೇತನ್ ವಿರುದ್ಧ ಎಫ್‌ಐಆರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.