ADVERTISEMENT

ನಟ ದರ್ಶನ್ ವೈದ್ಯಕೀಯ ಪರೀಕ್ಷೆ: ಬೌರಿಂಗ್‌ ಆಸ್ಪತ್ರೆ ಸುತ್ತಮುತ್ತ ಸಂಚಾರ ದಟ್ಟಣೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 19:46 IST
Last Updated 11 ಜೂನ್ 2024, 19:46 IST
<div class="paragraphs"><p>ನಟ ದರ್ಶನ್ ಅವರ ವಿಚಾರಣೆ ನಡೆದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಜನರು - ಪ್ರಜಾವಾಣಿ ಚಿತ್ರ </p></div>

ನಟ ದರ್ಶನ್ ಅವರ ವಿಚಾರಣೆ ನಡೆದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಜನರು - ಪ್ರಜಾವಾಣಿ ಚಿತ್ರ

   

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌, ಅವರ ಆಪ್ತೆ ಪವಿತ್ರಾಗೌಡ ಸೇರಿ 13 ಮಂದಿಯನ್ನು ಬೌರಿಂಗ್‌ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಆಸ್ಪತ್ರೆಯ ಸುತ್ತಮುತ್ತ ಜನರು ಜಮಾಯಿಸಿದ್ದರು. ಇದರಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಸಮಸ್ಯೆ ಎದುರಿಸಿದರು.

ಭದ್ರತೆ ದೃಷ್ಟಿಯಿಂದ ಅನ್ನಪೂರ್ಣೇಶ್ವರಿನಗರ ಠಾಣೆಯ ಸೆಲ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ನಿರ್ಧರಿಸಿದ್ದರು. ವೈದ್ಯರನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿತ್ತು. ನಂತರ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬೌರಿಂಗ್‌ ಆಸ್ಪತ್ರೆಗೆ ಸಂಜೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. 

ADVERTISEMENT

ದರ್ಶನ್ ಹಾಗೂ ಪವಿತ್ರಾಗೌಡ ಅವರನ್ನು ಪೊಲೀಸ್‌ ಜೀಪಿನಲ್ಲಿ ಹಾಗೂ ಉಳಿದ ಆರೋಪಿಗಳನ್ನು ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯಲಾಯಿತು. ಮಾರ್ಗದ ಉದ್ದಕ್ಕೂ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಭದ್ರತೆ ದೃಷ್ಟಿಯಿಂದ ಅನ್ನಪೂರ್ಣೇಶ್ವರಿ ನಗರದಲ್ಲಿ ಆರೋಪಿಗಳ ವಿಚಾರಣೆ ನಡೆಸಲಾಯಿತು. ಠಾಣೆ ಸುತ್ತಮುತ್ತಲೂ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು.

ಮೃತದೇಹ ಚಿತ್ರದುರ್ಗಕ್ಕೆ ರವಾನೆ: ಕೊಲೆಯಾದ ರೇಣುಕಾಸ್ವಾಮಿ ಅವರ ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿತ್ತು. ಮೃತದೇಹ ಕೊಂಡೊಯ್ಯಲು ಮಂಗಳವಾರ ನಗರಕ್ಕೆ ಪೋಷಕರು ಹಾಗೂ ಸಂಬಂಧಿಕರು ಬಂದಿದ್ದರು. ಮೃತದೇಹ ನೋಡಿ ಪೋಷಕರು ಕಣ್ಣೀರಿಟ್ಟರು. ‘ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು’ ಎಂದು ಆಗ್ರಹಿಸಿದರು.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಚಿತ್ರದುರ್ಗಕ್ಕೆ ರವಾನೆ ಮಾಡಲಾಯಿತು.   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.