ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದಾರೆ ಎಂದು ಮೌಲ್ವಿಯೊಬ್ಬರ ವಿರುದ್ಧ ಕಾಟನ್‍ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿದ್ದಸಂಜನಾ ಅವರು ಜಾಮೀನಿನ ಮೇಲೆ ಹೊರಬಂದಿದ್ದಾರೆ.
ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಎನ್ನುವವರು ದೂರು ನೀಡಿದ್ದಾರೆ.
'ಸಂಜನಾರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದಾರೆ. ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಕೋರಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.
ಡ್ರಗ್ಸ್ ಜಾಲ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಸಂಜನಾ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದರು. ಪ್ರಕರಣದ ಆರೋಪಿಯಾಗಿ ಬಂಧನಕ್ಕೆ ಒಳಗಾಗಿದ್ದಾಗ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.