ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಭಾರಿ ಹಾನಿ ಉಂಟಾಗಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಹೊರತುಪಡಿಸಿ, ಹೆಚ್ಚುವರಿಯಾಗಿ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಸಾಕಷ್ಟು ಮನೆಗಳು ಕುಸಿದಿವೆ. ರಸ್ತೆಗಳು ಹಾಳಾಗಿವೆ. ಮರಗಳು ಬಿದ್ದು ವಿದ್ಯುತ್ ಕಂಬ, ತಂತಿ, ಪರಿವರ್ತಕಗಳು ಹಾಳಾಗಿವೆ. ಹೀಗಾಗಿ ಎನ್‌ಡಿಆರ್‌ಎಫ್ ಮಾನದಂಡದ ಅನ್ವಯ ನೆರವು ನಿಗದಿ ಮಾಡಿದರೆ, ಸಮರ್ಪಕವಾಗಿ ಪರಿಹಾರ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ಹೆಚ್ಚುವರಿ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮನವಿ ಸಲ್ಲಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.