ADVERTISEMENT

ಆದಾಯ ಮೀರಿ ಆಸ್ತಿ ಗಳಿಕೆ: ಏ.5ಕ್ಕೆ ಡಿಕೆಶಿ ವಿರುದ್ಧದ ಅರ್ಜಿಗಳ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 15:52 IST
Last Updated 22 ಮಾರ್ಚ್ 2024, 15:52 IST
<div class="paragraphs"><p> ಡಿಕೆಶಿ</p></div>

ಡಿಕೆಶಿ

   

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳ ಕುರಿತ ಅಂತಿಮ ವಿಚಾರಣೆಯನ್ನು ಏಪ್ರಿಲ್ 5ರಿಂದ ನಡೆಸುವುದಾಗಿ ಹೈಕೋರ್ಟ್‌ ತಿಳಿಸಿದೆ.

ಅನುಮತಿ ಹಿಂಪಡೆದಿರುವ ಕ್ರಮವನ್ನು ಪ್ರಶ್ನಿಸಿ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು, ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ADVERTISEMENT

ಡಿ.ಕೆ.ಶಿವಕುಮಾರ್‌, ಸಿಬಿಐ ಮತ್ತು ಯತ್ನಾಳ್‌ ಪರ ವಕೀಲರ ವಾದಾಂಶ ಆಲಿಸಿದ ಪೀಠ ಏಪ್ರಿಲ್ 5ರಿಂದ ಅರ್ಜಿಗೆ ಸಂಬಂಧಿಸಿದ ಅಂತಿಮ ವಾದ-ಪ್ರತಿವಾದ ಆಲಿಸಲಾಗುವುದು ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.