ಬೆಂಗಳೂರು: ಟೋಯಿಂಗ್ ವಿಚಾರವಾಗಿ ಅಂಗವಿಕಲೆ ಮೇಲೆ ಎಎಸ್‌ಐ ಹಲ್ಲೆ ನಡೆಸಿದ್ದ ಘಟನೆ ಬೆನ್ನಲ್ಲೇ, ನಗರದಲ್ಲಿ ವಾಹನಗಳ ಟೋಯಿಂಗ್ ಮಾಡುವುದನ್ನೇ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
'ಜನರ ವಿರೋಧ ವ್ಯಕ್ತವಾಗುತ್ತಿರುವುದರಿಂದ, ವಾಹನಗಳನ್ನು ಟೋಯಿಂಗ್ ಮಾಡುವುದನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಟೋಯಿಂಗ್ 'ಟೈಗರ್' ವಾಹನಗಳು ನಗರದಲ್ಲಿ ಸೋಮವಾರ ಎಲ್ಲಿಯೂ ಸಂಚರಿಸಿಲ್ಲ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಇದನ್ನೂ ಓದಿ:ಅಂಗವಿಕಲ ಮಹಿಳೆಗೆ ಒದ್ದಿದ್ದ ಎಎಸ್‌ಐ ನಾರಾಯಣ ಅಮಾನತು
ಪೊಲೀಸರ ಸಭೆ:
'ಟೋಯಿಂಗ್ ವ್ಯವಸ್ಥೆ ಸುಧಾರಣೆ ಹೇಗೆ ? ಹಾಗೂ ಪೊಲೀಸರು ಜನರ ಜೊತೆ ಹೇಗೆ ನಡೆದುಕೊಳ್ಳಬೇಕು' ಎಂಬುದನ್ನು ತಿಳಿಸಲು ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರು ಸೋಮವಾರ ಸಭೆ ನಡೆಸಿದರು.
ನಗರದ ಎಲ್ಲ ಸಂಚಾರ ಠಾಣೆಗಳ ಎಎಸ್‌ಐ, ಪಿಎಸ್‌ಐ, ಇನ್‌ಸ್ಪೆಕ್ಟರ್, ಎಸಿಪಿ ಹಾಗೂ ಡಿಸಿಪಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ, ಸಂಚಾರ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.