ಬೆಂಗಳೂರು: ನಗರದಲ್ಲಿ ವಾಸಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ವು, ಇದರಿಂದ ಸಂಚಾರ ದಟ್ಟಣೆಯೂ ಏರಿಕೆಯಾಗಿ, ವಾಯು ಮಾಲಿನ್ಯ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸಾರಿಗೆ ಇಲಾಖೆ ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ‘ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ’ಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
’ನಗರದಲ್ಲಿ ವಾಸಿಸಬೇಕು ಎಂದು ಹಂಬಲಿಸುವವರ ಸಂಖ್ಯೆ ಹೆಚ್ಚಾಗಿದೆ. ಗ್ರಾಮಗಳು ಪಟ್ಟಣಗಳಾಗಿ, ಪಟ್ಟಣಗಳು ನಗರಗಳಾಗಿ, ನಗರಗಳು ಮಹಾನಗರಗಳಾಗಿ ರೂಪಾಂತರಗೊಳ್ಳುತ್ತಿವೆ. ಇದರಿಂದಾಗಿ ಶಬ್ಧ, ಜಲ ಹಾಗೂ ವಾಯುಮಾಲಿನ್ಯ ಉಂಟಾಗುತ್ತಿದೆ. ಕೊಳಚೆ ನೀರಿನ ಶುದ್ಧೀಕರಣ ಘಟಕವಿಲ್ಲದೇ ಜಲ ಮೂಲಗಳು ಹಾಳಾಗುತ್ತಿವೆ‘ ಎಂದು ಆತಂಕ ವ್ಯಕ್ತಪಡಿಸಿದರು.
ಎಲೆಕ್ಟ್ರಾನಿಕ್ ವಾಹನಗಳು ಪ್ರಸ್ತುತ ಮಾರುಕಟ್ಟೆಗೆ ಬಂದಿವೆ. ಇವುಗಳ ದರ ದುಬಾರಿ ಎನ್ನುವ ಕಾರಣದಿಂದ ಇವುಗಳ ಖರೀದಿಗೆ ಜನರು ಹಿಂದೇಟು ಹಾಕುತ್ತಿದ್ದಾರೆ. ಮುಂದಿನ ದಿನದಲ್ಲಿ ಎಲೆಕ್ಟ್ರಿಕ್ ವಾಹನಗಳ ಮೌಲ್ಯ ಕಡಿಮೆಗೊಳಿಸಿ ಮಾರುಕಟ್ಟೆಗೆಗೆ ಬಿಟ್ಟಾಗ ಖರೀದಿ ಪ್ರಮಾಣವೂ ಹೆಚ್ಚಾಗಲಿದೆ. ಹಂತ ಹಂತವಾಗಿ ಎಲೆಕ್ಟ್ರಾನಿಕ್ ವಾಹನಗಳ ಬಳಕೆ ಪ್ರಮಾಣ ಹೆಚ್ಚಾಗಲಿದೆ‘ ಎಂದರು.
ಚಿತ್ರನಟಿ ಐಂದ್ರಿತಾ ರೈ, ಪ್ರೊ.ಎಚ್.ಪರಮೇಶ್, ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.