ADVERTISEMENT

ಏರ್ ಶೋ ಮುನ್ನೆಚ್ಚರಿಕೆ ಬಗ್ಗೆ ಅಫಿಡವಿಟ್ ಸಲ್ಲಿಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 19:32 IST
Last Updated 7 ಜನವರಿ 2021, 19:32 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: 2021ರ ಏರ್ ಶೋ ಸಂದರ್ಭದಲ್ಲಿ ಈ ಹಿಂದಿನಂತೆ ಅವಘಡಗಳು ಸಂಭವಿಸದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿ ಮೂಲಕ ಅಫಿಡವಿಟ್ ಸಲ್ಲಿಸಬೇಕು ಎಂದು ರಕ್ಷಣಾ ಸಚಿವಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2019ರ ಏರ್ ಶೋ ಸಂದರ್ಭದಲ್ಲಿ ಸಂಭವಿಸಿದ ಅಗ್ನಿ ಅವಘಡದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ ಮತ್ತು ವಕೀಲರಾದ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ವಿಚಾರಣೆ ನಡೆಸಿತು.

277 ಕಾರುಗಳು ಸುಟ್ಟುಹೋಗಿರುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಪರಿಶೀಲನೆ ನಡೆಸಿದ ಪೀಠ, ‘ಮುಂದೆ ಈ ರೀತಿ ಆಗದಂತೆ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಸ್ಪಷ್ಟಪಡಿಸಬೇಕು. ಸ್ಥಳೀಯ ಸಂಸ್ಥೆಗಳು ವಾಯುಪಡೆ ಜತೆ ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ತಿಳಿಸಿತು.

ADVERTISEMENT

‘ಈ ವರ್ಷ ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡುವುದಿಲ್ಲ’ ಎಂದು ನ್ಯಾಯಾಲಯಕ್ಕೆ ಸರ್ಕಾರ ಸ್ಪಷ್ಟಪಡಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.