ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆ. 3ರಿಂದ ವೈಮಾನಿಕ ಪ್ರದರ್ಶನ ಆರಂಭವಾಗಲಿದ್ದು, ಯಾವುದೇ ಅನಾಹುತಗಳು ನಡೆಯದಂತೆ ನಗರ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.
ಏರ್ ಶೋ ಭದ್ರತಾ ಕ್ರಮಗಳ ಬಗ್ಗೆ ಶನಿವಾರ ಆದೇಶ ಹೊರಡಿಸಿರುವ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ನಗರದಲ್ಲಿ ಡ್ರೋನ್ ಹಾಗೂ ಮೈಕ್ರೋಲೈಟ್ಸ್ ಸೇರಿದಂತೆ ಇತರೆ ವಸ್ತುಗಳ ಹಾರಾಟವನ್ನು ನಿಷೇಧಿಸಿದ್ದಾರೆ.
‘ಏರ್ ಶೋಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳು ಬರಲಿದ್ದಾರೆ. ನಿರ್ದಿಷ್ಟ ವಿಮಾನಗಳ ಹಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಂಥ ವಿಮಾನಗಳ ಹಾರಾಟಕ್ಕೆ ಅಡಚಣೆಯಾಗುವ ಡ್ರೋನ್, ಮೈಕ್ರೋಲೈಟ್ಸ್, ಸಣ್ಣ ಏರ್ ಕ್ರಾಫ್ಟ್ ಹಾಗೂ ಬಲೂನ್ ಸೇರಿದಂತೆ ಯಾವುದೇ ವಸ್ತುವನ್ನು ಆಕಾಶದಲ್ಲಿ ಹಾರಿಸಬಾರದು’ ಎಂದೂ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.