ADVERTISEMENT

ಡಿ. 23ರಿಂದ ಅಖಿಲ ಭಾರತ ತೆಲುಗು ಸಮಾವೇಶ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 15:33 IST
Last Updated 18 ಡಿಸೆಂಬರ್ 2023, 15:33 IST

ಬೆಂಗಳೂರು: ತೆಲುಗು ವಿಜ್ಞಾನ ಸಮಿತಿ ಮತ್ತು ರಾಷ್ಟ್ರೇತರ ತೆಲುಗು ಒಕ್ಕೂಟ ಸಹಯೋಗದಲ್ಲಿ ಇದೇ 23 ಮತ್ತು 24ರಂದು ಅಖಿಲ ಭಾರತ ತೆಲುಗು ಸಂಘ ಸಂಸ್ಥೆಗಳ ಸಮಾವೇಶ ನಡೆಯಲಿದೆ.

ಮಲ್ಲೇಶ್ವರದ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಮೆಮೊರಿಯಲ್‌ ಹಾಲ್‌ ಹಿಂಭಾಗದಲ್ಲಿರುವ ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ ಸಮಾವೇಶ ಆಯೋಜಿಸಲಾಗಿದೆ. 23ರ ಬೆಳಿಗ್ಗೆ 9 ಗಂಟೆಗೆ ಸಮಾವೇಶ ಆರಂಭವಾಗಲಿದೆ. ಮಾಜಿ ಉಪರಾಷ್ಟ್ರಪ‍ತಿ ಎಂ. ವೆಂಕಯ್ಯನಾಯ್ಡು ಉದ್ಘಾಟಿಸಲಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪಾಲ್ಗೊಳ್ಳಲಿದ್ದಾರೆ.

ಎರಡು ದಿನ ನಡೆಯುವ ಸಮಾವೇಶದಲ್ಲಿ ತೆಲುಗು ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಗೋಷ್ಠಿಗಳು ನಡೆಯಲಿವೆ. ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕಲಾವಿದರಿಂದ ಕಲಾ ಪ್ರದರ್ಶನ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳು ನಡೆಯಲಿದ್ದು, ಸಮಾವೇಶದಲ್ಲಿ 22 ಸಂಘ ಸಂಸ್ಥೆಗಳ 300 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದು ಸಮಿತಿ ಅಧ್ಯಕ್ಷ ಎ. ರಾಧಾಕೃಷ್ಣ ರಾಜು ತಿಳಿಸಿದ್ದಾರೆ.

ADVERTISEMENT

ಶಾಸಕ ಡಾ. ಸಿ.ಎನ್. ಅಶ್ವಥ್‌ ನಾರಾಯಣ, ಮಂಡಳಿ ಬುದ್ಧಪ್ರಸಾದ್, ತೆಲುಗು ವಿಶ್ವವಿದ್ಯಾಲಯದ ಕುಲಪತಿ ಟಿ. ಕಿಶನ್ ರಾವ್ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.