ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶ ರಾಜ್ಯ ಘಟಕಗಳಿಗೆ ಆಗಸ್ಟ್ 25ರಂದು ಚುನಾವಣೆ ನಡೆಯಲಿದೆ.
ಚುನಾವಣಾಧಿಕಾರಿ ಎಂ.ಬಿ. ದ್ಯಾಬೇರಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದರು.
ಆ.1ರಿಂದ ಆ.7ರ ವರೆಗೆ ನಾಮಪತ್ರ ಸ್ವೀಕಾರ ನಡೆಯಲಿದೆ. ಆ.8ರಂದು ನಾಮಪತ್ರ ಪರಿಶೀಲನೆ, ಆ.11 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಆಗಿದೆ. ಆ.25ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಅಂದು ಸಂಜೆ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.
ಅಧ್ಯಕ್ಷರು ಮತ್ತು ಕಾರ್ಯನಿರ್ವಹಾಕ ಸಮಿತಿ ಸದಸ್ಯರು ಸೇರಿ ಒಟ್ಟು 41 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೊತೆಗೆ ಮಹಾಸಭಾದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ. ಕರ್ನಾಟಕದ 30, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರಗಳಿಂದ ಕೇಂದ್ರ ಕಾರ್ಯಕಾರಿ ಸಮಿತಿಗೆ ತಲಾ ಒಬ್ಬ ಮಹಿಳೆ ಸೇರಿ ತಲಾ 5 ಸದಸ್ಯರ ಆಯ್ಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ 31 ಜಿಲ್ಲೆ, 1 ಮಹಾನಗರ ಪಾಲಿಕೆ, 176 ತಾಲ್ಲೂಕು ಘಟಕಗಳ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿಗೆ ಸದಸ್ಯರ ಆಯ್ಕೆಯಾಗಿದೆ ಎಂದು ರಾಜ್ಯ ಘಟಕದ ಚುನಾವಣಾಧಿಕಾರಿ ಸಿ.ಎಸ್. ವೀರೇಶ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.