ADVERTISEMENT

ನಾಳೆ ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜ ರಾಜ್ಯಮಟ್ಟದ ಮುಖಂಡರ ಸಮಾವೇಶ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 14:40 IST
Last Updated 19 ಜೂನ್ 2024, 14:40 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜವು ಇದೇ 20ರಂದು ರಾಜ್ಯಮಟ್ಟದ ಸಮಾವೇಶ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅರಮನೆ ಮೈದಾನದ ವೈಟ್‌ ಪೆಟಲ್ಸ್‌ (ಗೇಟ್‌ ನಂ. 3)ರಲ್ಲಿ ಹಮ್ಮಿಕೊಂಡಿದೆ. 

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಮಳವಳ್ಳಿ ಶ್ರೀನಿವಾಸ್, ‘ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ ಅನುದಾನ ನೀಡಬೇಕು. ನಿಗಮದಲ್ಲಿ ಬಾಕಿ ಇರುವ ಸಾಲವನ್ನು ಮನ್ನಾ ಮಾಡುವುದು, ವಿಧಾನಸೌಧ, ವಿಕಾಸಸೌಧ ಹಾಗೂ ಶಾಸಕರ ಭವನದ ಆವರಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕು. ಕೆಪಿಎಸ್‌ಸಿ, ಯುಪಿಎಸ್‌ಸಿ ತರಬೇತಿ ಕೇಂದ್ರ ಸ್ಥಾಪನೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

ADVERTISEMENT

‘2023–24ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 75ಕ್ಕೂ ಹೆಚ್ಚು ಅಂಕಗಳಿಸಿದ 1,101 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು’ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶದ ಅಧ್ಯಕ್ಷತೆವಹಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸಚಿವರಾದ ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.