ಬೆಂಗಳೂರು: ವಂಡರ್ ಲಾ ಮನರಂಜನಾ ಉದ್ಯಾನಕ್ಕೆ ತೆರಳುವ ಪ್ರಯಾಣಿಕರಿಗೆ ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ.
ನಗರದ ವಿವಿಧ ಭಾಗಗಳಿಂದ ನಾಲ್ಕು ಮಾರ್ಗಗಳಲ್ಲಿ ವಂಡರ್ ಲಾ ಕಡೆಗೆ 10 ಬಸ್‌ಗಳು ದಿನಕ್ಕೆ 20 ಟ್ರಿಪ್‌ಗಳನ್ನು ಏಕಮುಖವಾಗಿ ನಡೆಸಲಿವೆ. ಹವಾನಿಯಂತ್ರಿತ ಹವಾನಿಯಂತ್ರಿತ ವಜ್ರ ಸಾರಿಗೆ ಕಾರ್ಯಾಚರಣೆ ಮಾಡಲಿವೆ.
ಹವಾನಿಯಂತ್ರಿತ ವಜ್ರ ಬಸ್‌ಗಳಲ್ಲಿ ಕೆಂಪೇಗೌಡ ಬಸ್ ನಿಲ್ದಾಣದಿಂದ ‘ವಂಡರ್ ಲಾ’ಗೆ ಸಂಚರಿಸುವ ಪ್ರಯಾಣಿಕರು ಜ. 15ರಿಂದ ಕೆಎಸ್‌ಆರ್‌ಟಿಸಿ ಅವತಾರ್ ತಂತ್ರಾಂಶದಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.