ಬೆಂಗಳೂರು: ವಿಶ್ವ ಪರಿಸರ ದಿನದ ಪ್ರಯುಕ್ತ ನಗರದ ವಿಮೊವ್ ಫೌಂಡೇಷನ್ ಜೂನ್ 5ರಂದು ಬೆಳಿಗ್ಗೆ 11 ಗಂಟೆಗೆ ನ್ಯೂ ಹಾರಿಜನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಆಲ್ಟರ್ನೆಟಿವ್ 23’ (ಪರ್ಯಾಯ) ಶೀರ್ಷಿಕೆಯಡಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮಗಳು ಫೌಂಡೇಷನ್‌ನ ಸಂಸ್ಥಾಪಕ ವಿನಯ್ ಶಿಂಧೆ ನೇತೃತ್ವದಲ್ಲಿ ನಡೆಯಲಿವೆ. ಆನ್‌ಲೈನ್‌ನಲ್ಲಿಯೂ ಕಾರ್ಯಕ್ರಮದ ನೇರ ಪ್ರಸಾರ ಇರಲಿದೆ.
‘ಯುವಜನರಲ್ಲಿ ಪರಿಸರ ಕಾಳಜಿ ಉಂಟು ಮಾಡುವುದು, ದೇಶೀಯ ಉತ್ಪನ್ನಗಳನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶ. ಸಾವಿರಕ್ಕೂ ಅಧಿಕ ಯುವಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಾಮಾಜಿಕ ಜಾಗೃತಿ ಮೂಡಿಸುವ ವಿಡಿಯೊವನ್ನೂ ಬಿಡುಗಡೆ ಮಾಡಲಾಗುತ್ತದೆ.
ಪರಿಸರವಾದಿಗಳು, ಸೆಲೆಬ್ರಿಟಿಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ವಿನಯ್ ಶಿಂಧೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.