ADVERTISEMENT

ಸಂಚಾರ ದಟ್ಟಣೆ ಸಾಧ್ಯತೆ: ಪರ್ಯಾಯ ಮಾರ್ಗಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2023, 21:13 IST
Last Updated 26 ನವೆಂಬರ್ 2023, 21:13 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಸಂಯುಕ್ತ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘಟನೆಗಳು, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನ.27 ಹಾಗೂ 28ರಂದು ‘ಮಹಾಧರಣಿ’ ಹಮ್ಮಿಕೊಂಡಿದ್ದು, ಈ ಭಾಗದಲ್ಲಿ ಎರಡು ದಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ವಾಹನ ಸವಾರರು, ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಕೆ.ಜಿ. ರಸ್ತೆ ಮೂಲಕ ಮೈಸೂರು ಬ್ಯಾಂಕ್‌ ವೃತ್ತದಿಂದ ಬಲಕ್ಕೆ ತಿರುವು ಪಡೆದು ಫ್ರೀಡಂ ಪಾರ್ಕ್‌ ಕಡೆಗೆ ಬರುವ ವಾಹನಗಳು ಪ್ಯಾಲೇಸ್‌ ಕ್ರಾಸ್‌ ರಸ್ತೆಯ ಮಹಾರಾಣಿ ಕೆಳಸೇತುವೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ADVERTISEMENT

ಫ್ರೀಡಂ ಪಾರ್ಕ್‌ ಜಂಕ್ಷನ್‌ನಿಂದ ಕನದಾಸ ವೃತ್ತದ ಕಡೆಗೆ ಬರುವ ಹಾಗೂ ಹೋಗುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್ ಜಂಕ್ಷನ್‌ ಕಡೆಗೆ ಬರುವ ರಸ್ತೆಯು ಹಾಲಿ ಏಕಮುಖ ಸಂಚಾರ ರಸ್ತೆಯಾಗಿದ್ದು ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದ್ದಾರೆ.

ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ, ವೈ.ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್‌ ರಸ್ತೆ, ಕೆಜಿ ರಸ್ತೆಗಳಲ್ಲಿ ಯಾವುದೇ ಮಾದರಿ ವಾಹನಗಳಿಗೆ ನಿಲುಗಡೆಗೆ ಅವಕಾಶ ಇರುವುದಿಲ್ಲ ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.