ಬೆಂಗಳೂರು: ‘ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸಿ ರಾಷ್ಟ್ರೀಯ ಮಟ್ಟದ ಕ್ರೀಡೆಗಳ ಆಯೋಜಿಸುವ ರೀತಿಯಲ್ಲಿ ಸಜ್ಜುಗೊಳಿಸಲಾಗುವುದು’ ಎಂದು ವಸತಿ ಸಚಿವ ಹಾಗೂ ಕ್ಷೇತ್ರದ ಶಾಸಕ ವಿ. ಸೋಮಣ್ಣ ಹೇಳಿದರು.
ರಾಜ್ ಕುಮಾರ್ ವಾರ್ಡ್ ಹಾಗೂ ಅ.ದಾಸರಹಳ್ಳಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಉನ್ನತೀಕರಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
‘ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಅಂದಾಜು ₹18.00 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣವನ್ನು ಉನ್ನತೀಕರಿಸಲಾಗುವುದು’ ಎಂದರು.
ಉನ್ನತೀಕರಣಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರ ಅಭಿಪ್ರಾಯ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದರು.
‘ಕ್ರೀಡಾಂಗಣದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಸಂಬಂಧ ವಾರಕ್ಕೊಮ್ಮೆ ಪ್ರಗತಿ ಕಾಮಗಾರಿಯ ತಪಾಸಣೆ ನಡೆಸಲಾಗುವುದು. ಸದರಿ ಕಾಮಗಾರಿಯ ಅಭಿವೃದ್ಧಿಗೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಯನ್ನು ಉಸ್ತುವಾರಿಯಾಗಿ ನೇಮಿಸಿ ಆ ಮೂಲಕ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಸಳಿಸಬೇಕು’ ಎಂದೂ ಹೇಳಿದರು.
ಪಶ್ಚಿಮ ವಲಯ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.