ADVERTISEMENT

ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ‘ಸನ್ಮಿನಾ’ ಆಸಕ್ತಿ

ಅಮೆರಿಕ ಭೇಟಿ ವೇಳೆ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲರಿಗೆ ಭರವಸೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 20:15 IST
Last Updated 4 ಅಕ್ಟೋಬರ್ 2024, 20:15 IST
ಅಮೆರಿಕದ ತಂತ್ರಜ್ಞಾನ ಕಂಪನಿಗಳ ಪ್ರತಿನಿಧಿಗಳೊಂದಿಗೆ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ. ಎಸ್.ಸೆಲ್ವಕುಮಾರ್, ಗುಂಜನ್‌ ಕೃಷ್ಣ ಇದ್ದಾರೆ.
ಅಮೆರಿಕದ ತಂತ್ರಜ್ಞಾನ ಕಂಪನಿಗಳ ಪ್ರತಿನಿಧಿಗಳೊಂದಿಗೆ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ. ಎಸ್.ಸೆಲ್ವಕುಮಾರ್, ಗುಂಜನ್‌ ಕೃಷ್ಣ ಇದ್ದಾರೆ.   

ಬೆಂಗಳೂರು: ರಾಜ್ಯದಲ್ಲಿ ತಮ್ಮ ವಹಿವಾಟು ವಿಸ್ತರಿಸಲು ಅಮೆರಿಕದ ಸನ್ಮಿನಾ ಮತ್ತು ಲೀಪ್‌ ಫೈವ್‌ ಟೆಕ್ನಾಲಜಿ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ.

ರಾಜಧಾನಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳನ್ನು ಆಹ್ವಾನಿಸಲು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಈ ಉದ್ಯಮಗಳ ಪ್ರಮುಖರ ಜೊತೆಗೆ ನಡೆಸಿದ ಸಮಾಲೋಚನೆಯಲ್ಲಿ ಈ ಇಂಗಿತ ವ್ಯಕ್ತವಾಗಿದೆ.

ತಯಾರಿಕಾ ದಕ್ಷತೆ ಹೆಚ್ಚಿಸುವ ಸೇವೆ ಹಾಗೂ ತಂತ್ರಜ್ಞಾನ ಒದಗಿಸುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿ ಇರುವ ಸನ್ಮಿನಾ ಕಂಪನಿಯ ವಿಸ್ತರಣಾ ಯೋಜನೆಗಳಿಗೆ ಬೆಂಬಲ ನೀಡುವುದಾಗಿ ಪಾಟೀಲ ಅವರು ಭರವಸೆ ನೀಡಿದ್ದಾರೆ.

ADVERTISEMENT

ರಾಜ್ಯದಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸುವ ಸಾಧ್ಯತೆಗಳನ್ನು ಲೀಪ್‌ ಫೈವ್‌ ಟೆಕ್ನಾಲಜಿಯ ಸಿಇಒ ಅಗ್ಲೈಯಾ ಕಾಂಗ್‌ ಅವರು ಸಚಿವರ ಗಮನಕ್ಕೆ ತಂದಿದ್ದಾರೆ.

ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಸನ್ಮಿನಾ ಮತ್ತು ಲೀಪ್‌ ಫೈವ್ ಟೆಕ್ನಾಲಜಿ ಕಂಪನಿಗಳ ಮುಖ್ಯಸ್ಥರಿಗೆ ಸಚಿವರು ಇದೇ ವೇಳೆ ಔಪಚಾರಿಕ ಆಹ್ವಾನ ನೀಡಿದ್ದಾರೆ.

ನಿಯೋಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.