ಬೆಂಗಳೂರು: ‘ಸಾರ್ವಜನಿಕರ ಮೊಬೈಲ್‌ಗಳನ್ನು ಪೊಲೀಸರು ಅನಗತ್ಯವಾಗಿ ಕಸಿದುಕೊಳ್ಳುವುದು ಸರಿಯಲ್ಲ. ಯಾರಾದರೂ ಪೊಲೀಸರು ಮೊಬೈಲ್ ಕಸಿದುಕೊಂಡಿರುವ ಬಗ್ಗೆ ದೂರು ನೀಡಿದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.
‘ತಪಾಸಣೆ ನೆಪದಲ್ಲಿ ಪೊಲೀಸರು ಅನಗತ್ಯವಾಗಿ ಮೊಬೈಲ್ ಕಸಿದುಕೊಳ್ಳುತ್ತಿದ್ದಾರೆ. ವಿನಾಕಾರಣ ಪ್ರಶ್ನೆಗಳನ್ನು ಕೇಳಿ ಜನರಿಗೆ ತೊಂದರೆ ನೀಡುತ್ತಿದ್ದಾರೆ’ ಎಂಬುದಾಗಿ ನಿಖಿಲ್ ಎಂಬುವರು ಟ್ವೀಟ್
ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಮಲ್ ಪಂತ್, ‘ನಿರ್ದಿಷ್ಟ ಘಟನೆ ಬಗ್ಗೆ ಮಾಹಿತಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇನೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.