ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಆಂಧ್ರದಲ್ಲಿ ನಡೆದ ರಾಜಕೀಯ ವಿದ್ಯಮಾನದಂತೆ ಇಲ್ಲೂ ಸಂಭವಿಸುತ್ತದೆ ಎಂದು ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್‌ಗೌಡ ಹೇಳಿದ್ದಾರೆ.
ರಾಜ್ಯದಲ್ಲಿ ಯಡಿಯೂರಪ್ಪ ಅವರ ರಾಜೀನಾಮೆ ಪಡೆದರೆ ಬಿಜೆಪಿಗೆ ಹೊಡೆತ ಬೀಳುವುದು ಖಚಿತ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಬದಲಿಸಬಾರದು ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.
ಆಂಧ್ರದಲ್ಲಿ ವೈ.ಎಸ್.ರಾಜಶೇಖರ ರೆಡ್ಡಿ ನಿಧನದ ಬಳಿಕ ಅವರ ಪುತ್ರ ಜಗನ್ ಮೋಹನ ರೆಡ್ಡಿಯನ್ನು ಕಾಂಗ್ರೆಸ್ ಕಡೆಗಣಿಸಿ, ಪಕ್ಷದಿಂದ ಹೊರ ಹಾಕಿದ ಪರಿಣಾಮ, ಅವರು ಪ್ರತ್ಯೇಕ ಪಕ್ಷ ಕಟ್ಟಿ, ಏಕಾಂಗಿ ಹೋರಾಟ ನಡೆಸಿ ಮುಖ್ಯಮಂತ್ರಿ ಆದರು. ಅದೇ ರೀತಿ ಇಲ್ಲೂ ಆಗುತ್ತದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.
ಆಂಧ್ರದಲ್ಲಿ ಜಗನ್ ಮೋಹನ ರೆಡ್ಡಿ ಮುಖ್ಯಮಂತ್ರಿ ಆದಂತೆ ಇಲ್ಲೂ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುತ್ತಾರಾ ಎಂಬ ಪ್ರಶ್ನೆಗೆ, ಹೌದು ಅದೇ ರೀತಿ ಆಗಬಹುದು ಎಂದು ಸುರೇಶ್ ಗೌಡ ಹೇಳಿದರು.
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಪ್ರತಿ ಸಲವೂ ಅವರಿಗೆ ತೊಂದರೆ ನೀಡಲಾಗುತ್ತಿದೆ. ಈ ಬಾರಿ ತೊಂದರೆ ಕೊಟ್ಟರೆ ಪಕ್ಷಕ್ಕೆ ಕಷ್ಟ ಎದುರಾಗಬಹುದು ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.