ಬೆಂಗಳೂರು: ರಾಷ್ಟ್ರಕವಿ ಕುವೆಂಪು ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಂಘರ್ಷ ಸಮಿತಿ ನೀಡುವ ‘ಅನಿಕೇತನ ಪ್ರಶಸ್ತಿ’ಗೆ ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ₹ 5 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ‘ನಂ.ನಂಜಪ್ಪ ಚಿರಂತನ ಪ್ರಶಸ್ತಿ’ಗೆ ವಿಚಾರವಾದಿಗಳ ಸಂಘದ ಅಧ್ಯಕ್ಷ ಎ.ಎಸ್.ನಟರಾಜ್ ಅವರ ‘ಮೌಢ್ಯ ಮತ್ತು ವೈಚಾರಿಕತೆ’ ಕೃತಿ ಆಯ್ಕೆಯಾಗಿದೆ. ಈ ಪ್ರಶಸ್ತಿ ₹ 5 ಸಾವಿರ ನಗದು ಬಹುಮಾನ ಒಳಗೊಂಡಿದೆ.
‘ಕುವೆಂಪು ಯುವಕವಿ ಪ್ರಶಸ್ತಿ’ಗೆ ಚಾಂದ್ಪಾಷ ಆಯ್ಕೆಯಾಗಿದ್ದು,ಪ್ರಶಸ್ತಿಯು ₹ 1 ಸಾವಿರ ನಗದು ಬಹುಮಾನ ಹಾಗೂ ಫಲಕ ಒಳಗೊಂಡಿದೆ.
ಜ.10ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.