ADVERTISEMENT

ಉತ್ತರ ಪತ್ರಿಕೆ ಮೌಲ್ಯಮಾಪನ: ಸುಗ್ರೀವಾಜ್ಞೆ ರದ್ದು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 21:36 IST
Last Updated 15 ಫೆಬ್ರುವರಿ 2021, 21:36 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಎಂಬಿಬಿಎಸ್ ಕೋರ್ಸ್‌ನ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಿಯಂತ್ರಿಸುವ ಸಂಬಂಧ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ಹೊರಡಿಸಿದ ಸುಗ್ರೀವಾಜ್ಞೆ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ.

ತಿದ್ದುಪಡಿ ಪ್ರಶ್ನಿಸಿ ಬಿ.ಕೆ. ಬಸಂತ್ ಮತ್ತು ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌. ದೇವದಾಸ್ ಅವರಿದ್ದ ಪೀಠ, ಈ ಆದೇಶ ನೀಡಿದೆ.

‘ಯಾವ ಪ್ರಕರಣಗಳಲ್ಲಿ ನಾಲ್ಕು ಮೌಲ್ಯಮಾಪನಗಳಲ್ಲಿ ಶೇ 15ರಷ್ಟು ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ವ್ಯತ್ಯಾಸ ಆಗಿದೆಯೋ ಅಂತಹ ಪ್ರಕರಣಗಳಲ್ಲಿ ಐದನೇ ಮೌಲ್ಯಮಾಪನಕ್ಕೆ ಅವಕಾಶ ಕೊಡಬಹುದು. ಇದು ಅನುತ್ತೀರ್ಣರಾಗಿರುವ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ’ ಎಂದು ನ್ಯಾಯಾಲಯ ಆದೇಶಿಸಿದೆ.

ADVERTISEMENT

‘ಸಲಹಾ ಮಂಡಳಿಯಂತಹ ತಜ್ಞರ ಅಭಿಪ್ರಾಯವನ್ನು ಪಡೆಯದೆ, ಸುಗ್ರೀವಾಜ್ಞೆ ಹೊರಡಿಸಿದ ರೀತಿ ವೈದ್ಯಕೀಯ ಶಿಕ್ಷಣದ ಭವಿಷ್ಯಕ್ಕೆ ಉತ್ತಮ ಅಲ್ಲ. ನೀತಿಗಳನ್ನು ರೂಪಿಸುವಾಗ, ತಜ್ಞರ ಅಭಿಪ್ರಾಯವನ್ನು ಪಡೆಯಬೇಕು ಮತ್ತು ವಿದ್ಯಾರ್ಥಿ ಸಮುದಾಯದ ಕುಂದು–ಕೊರತೆಗಳನ್ನು ಸಹ ಕೇಳಬೇಕು’ ಎಂದು ಪೀಠ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.