ADVERTISEMENT

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2024, 15:35 IST
Last Updated 1 ಜುಲೈ 2024, 15:35 IST
   

ಬೆಂಗಳೂರು: ‘ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣ ವೇದಿಕೆಯ (ಕರವೇ) ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸೋಮವಾರ ಮನವಿ ಸಲ್ಲಿಸಿತು.

ಬಳಿಕ ಮಾತನಾಡಿದ ನಾರಾಯಣ ಗೌಡ, ‘ಸಿದ್ದರಾಮಯ್ಯ ಅವರು ಕನ್ನಡಪರ ಮುಖ್ಯಮಂತ್ರಿ. ನಮ್ಮ ಎಲ್ಲ ಬೇಡಿಕೆಗಳನ್ನೂ ಪರಿಶೀಲಿಸಿ ಈಡೇರಿಸುವ ಭರವಸೆ ನೀಡಿದ್ದಾರೆ’ ಎಂದರು.

ಖಾಸಗಿ ವಲಯದಲ್ಲಿ ಶೇಕಡ 100ರಷ್ಟು ಹುದ್ದೆಗಳನ್ನು ಕನ್ನಡಿಗರಿಗೇ ಮೀಸಲಿಡುವುದನ್ನು ಕಡ್ಡಾಯಗೊಳಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.